ಬೆಳಗಾವಿ: ಬೆಳಗಾವಿಯಲ್ಲಿ ಸೋಮವಾರ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಮೊದಲ ದಿನವೇ ಸುರ್ವಣಸೌಧ ಎದುರು ಸಾಲು ಸಾಲು ಪ್ರತಿಭಟನೆ ನಡೆಯುತ್ತಿವೆ. ಹನ್ನೊಂದು 11 ವಿವಿಧ ಸಂಘಟನೆಗಳು, ತಮ್ಮ ಬೇಡಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿವೆ. ಬೆಳಗಾವಿಯಲ್ಲಿ ಅಧಿವೇಶನದ ಸಮಯದಲ್ಲೇ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಟ್ರ್ಯಾಕ್ಟರ್ ಚಲೋ ಹೋರಾಟ ಹಮ್ಮಿಕೊಳ್ಳಲಾಗಿತ್ತು. ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿತ್ತು. ಆದರೆ, ಸರ್ಕಾರ ಸೋಮವಾರ ಮತ್ತು ಮಂಗಳವಾರ ಹೋರಾಟದ ವಾಹನಗಳಿಗೆ ಬೆಳಗಾವಿ ಪ್ರವೇಶಕ್ಕೆ ನಿಷೇಧ ಹೇರಿ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದು, ಸಿದ್ದರಾಮಯ್ಯ ಸರ್ಕಾರ ಪ್ರಜಾಪ್ರಭುತ್ವವನ್ನೇ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಬಸನಗೌಡ ಪಾಟೀಲ ಯತ್ನಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹದಾಯಿ ಯೋಜನೆ ಅನುಷ್ಠಾನ ಮಾಡಬೇಕು, ಕಬ್ಬಿನ ಬಿಲ್ ನಿಗದಿ ಮಾಡಬೇಕು, ವಕ್ಫ್ನಿಂದ ರೈತರ ಜಮೀನು ರಕ್ಷಣೆಗೆ ಒತ್ತಾಯಿಸಿ, ವಿವಿಧ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.
ಪ್ರತಿ ನಾಲ್ಕು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಕೆಎಸ್ಆರ್ಟಿಸಿ ಲೇಬರ್ ನಿಗಮ ಸಂಘ, ಎಸ್ಟಿ ಮೀಸಲಾತಿಗೆ ಆಗ್ರಹಿಸಿ ಅಖಿಲ ಕರ್ನಾಟಕ ಹೂಗಾರ ಮಹಾಸಭಾ ಸಂಘ ಪ್ರತಿಭಟನೆಗೆ ಮುಂದಾಗಿದೆ. ಗದಗ ಹರಪನಹಳ್ಳಿ ರೈಲು ಮಾರ್ಗ ನಿರ್ಮಾಣಕ್ಕೆ ಒತ್ತಾಯಿಸಿ ಪ್ರತಿಭಟನೆ ಸೇರಿದಂತೆ ಹೀಗೆ ಸಾಲು ಸಾಲು ಪ್ರತಿಭಟನೆಗಳು ನಡೆಯುತ್ತಿವೆ.
More Stories
ಸದನದೊಳಗಿನ ವಿಚಾರದಲ್ಲಿ ಪೊಲೀಸರಿಗೆ ಕ್ರಮ ಕೈಗೊಳ್ಳಲು ಅಧಿಕಾರವಿಲ್ಲ: ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ
ಸಿಟಿ ರವಿ ವಿರುದ್ಧ ಕಾನೂನು ಹೋರಾಟ: ಲಕ್ಷ್ಮಿ ಹೆಬ್ಬಾಳಕರ
ಕಾಂಗ್ರೆಸ್ ಆರೋಪ ಸುಳ್ಳು: ಆತ್ಮಸಾಕ್ಷಿ ವಿರುದ್ಧ ನಡೆದುಕೊಂಡಿಲ್ಲ: ಸಿ ಟಿ ರವಿ