riseofgadag.com

ಕನ್ನಡ ಜನಮನದ ಜೀವನಾಡಿ

ಮಾಜಿ ಸಿಎಂ ಎಸ್ ಎಂ ಕೃಷ್ಣ ವಿಧಿವಶ

ಬೆಂಗಳೂರು: ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್​ಎಂ ಕೃಷ್ಣ ಅವರು ನಿಧನರಾಗಿದ್ದಾರೆ.
ಎಸ್​ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮಂಗಳವಾರದಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ವೇಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಡಿಸೆಂಬರ್​ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಾಗುವುದು.
ಅಂತ್ಯಕ್ರಿಯೆ ಎಲ್ಲಿ?
ಎಸ್​ಎಂ ಕೃಷ್ಣ ಅಂತ್ಯಕ್ರಿಯೆ ಅವರ ತವರು ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ ನಡೆಯಲಿದೆ. ಎಸ್​ಎಂ ಕೃಷ್ಣಗೆ ಇಷ್ಟವಾದ ಜಾಗದಲ್ಲಿಯೇ, ಅಂದರೆ ಕಾಫಿಡೇ ಆವರಣದಲ್ಲಿ ಅಂತ್ಯಕ್ರಿಯೆ‌ ನಡೆಯಲಿದೆ.

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 73536 56555