riseofgadag.com

ಕನ್ನಡ ಜನಮನದ ಜೀವನಾಡಿ

ಮಾಜಿ ಸಿಎಂ ದಿವಂಗತ ಎಸ್ ಎಂ ಕೃಷ್ಣ ಅವರಿಗೆ ಕರ್ನಾಟಕ ರತ್ನ ನೀಡಿ: ಆರ್ ಅಶೋಕ

ಬೆಂಗಳೂರು: ಮಾಜಿ ಸಿಎಂ ದಿವಂಗತ ಎಸ್‌ಎಂ ಕೃಷ್ಟಾ ಅವರಿಗೆ ಕರ್ನಾಟಕ ರತ್ನ ಗೌರವವನ್ನು ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮನವಿ ಮಾಡಿದ್ದಾರೆ.
ಮಾಜಿ ಸಿಎಂ ಕೃಷ್ಣ ಅವರು ರಾಷ್ಟ್ರದ ರಾಜಕಾರಣದ ಧೀಮಂತ ನಾಯಕರಾಗಿದ್ದಾರೆ. ಅವರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು ಕಂಬನಿ ಮಿಡಿಯುತ್ತಿದ್ದಾರೆ. ಶಾಸಕ, ಸಚಿವ, ಸ್ಪೀಕರ್, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ, ಹೀಗೆ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಜೊತೆಗೆ, ಜನರ ಬದುಕಿನ ಸುಧಾರಣೆಗಾಗಿ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಅವರು ಅಪಾರವಾಗಿ ಶ್ರಮಿಸಿದ್ದಾರೆ. ರಾಜಧಾನಿ ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಹಾಗೂ ಐಟಿ ಕೇಂದ್ರದ ಸ್ಥಾನಮಾನ ನೀಡುವಲ್ಲಿ ಅವರ ಪಾತ್ರ ಗಣನೀಯ. ವಿದೇಶಾಂಗ ಸಚಿವರಾಗಿ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲೂ ಸೇವೆ ಸಲ್ಲಿಸಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.
ಎಸ್.ಎಂ.ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ (ಮರಣೋತ್ತರ) ನೀಡುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯ. ಆದ್ದರಿಂದ ತಾವು ಈ ಸಲಹೆಯನ್ನು ಪರಿಗಣಿಸಿ ಶ್ರೀಯುತರಿಗೆ ‘ಕರ್ನಾಟಕ ರತ್ನ’ ನೀಡಿ ಗೌರವ ಸಲ್ಲಿಸಬೇಕೆಂದು ಮನವಿ ಮಾಡಿದ್ದಾರೆ.

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 73536 56555