riseofgadag.com

ಕನ್ನಡ ಜನಮನದ ಜೀವನಾಡಿ

ಮಾಜಿ ಸಿಎಂ ಎಸ್ ಎಂ ಕೃಷ್ಣ ಪಂಚಭೂತಗಳಲ್ಲಿ ಲೀನ

ಮಂಡ್ಯ: ಅಗಲಿದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ತಮ್ಮ ಹುಟ್ಟೂರು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಬುಧವಾರ ಪಂಚಭೂತಗಳಲ್ಲಿ ಲೀನವಾದರು. ಕುಟುಂಬಸ್ಥರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಅಗಲಿದ ನಾಯಕನಿಗೆ ಅಂತಿಮ ವಿದಾಯ ಹೇಳಿದರು.

ಸೋಮೇನಹಳ್ಳಿಯ ಬೆಂಗಳೂರು-ಮೈಸೂರು ಹೆದ್ದಾರಿ ಪಕ್ಕದಲ್ಲಿರುವ ಕಾಫಿ ಡೇ ಹತ್ತಿರದ ಖಾಲಿ ಜಾಗದಲ್ಲಿ ಒಕ್ಕಲಿಗ ಸಂಪ್ರದಾಯದAತೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ಪುತ್ರ ಹಾಗೂ ಎಸ್.ಎಂ.ಕೃಷ್ಣ ಅವರ ಮೊಮ್ಮಗ ಅಮರ್ಥ್ಯ ಹೆಗ್ಡೆ ತಾತನ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ೧೫ ವೈದಿಕರ ತಂಡದಿAದ ವಿಧಿ-ವಿಧಾನ ಕಾರ್ಯಗಳು ನಡೆಸಿದರು. ಹಲವು ಯತಿಗಳು, ವಿವಿಧ ಮಠಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ಕೃಷ್ಣ ಅವರ ಅಂತ್ಯಕ್ರಿಯೆ ಜರುಗಿತು.

ಇದಕ್ಕು ಮುನ್ನ ಎಸ್ ಎಂ ಕೃಷ್ಣ ಅವರ ಪಾರ್ಥಿವ ಶರೀರಕ್ಕೆ ಆಡಳಿತ ಮತ್ತು ವಿಪಕ್ಷ ನಾಯಕರು ಅಂತಿಮ ನಮನ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಕೇಂದ್ರ ಸಚಿವರಾದ ಎಚ್‌ಡಿ ಕುಮಾರಸ್ವಾಮಿ ಹಾಗೂ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಸಚಿವ ಚಲುವರಾಯಸ್ವಾಮಿ, ವಿಧಾನಸಭೆ ಸ್ಪೀಕರ್ ಯುಟಿ ಖಾದರ್, ಸಿಟಿ ರವಿ, ನಿರ್ಮಲಾನಂದನಾಥಶ್ರೀ, ಆರ್ ಅಶೋಕ್ ಸೇರಿದಂತೆ ಅನೇಕ ಗಣ್ಯರು ಪುಷ್ಪ ನಮನ ಸಲ್ಲಿಸಿದರು.

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 73536 56555