ಬೆಳಗಾವಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರನ್ನು ನಿರಂತರವಾಗಿ ಅವಮಾನಿಸಿರುವ ಕಾಂಗ್ರೆಸ್ಸಿಗರಿಗೆ ಡಾ. ಬಾಬಾ ಸಾಹೇಬರ ಫೋಟೊ ಹಿಡಿಯುವ ಅರ್ಹತೆಯಾಗಲಿ ಯೋಗ್ಯತೆಯಾಗಲಿ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಕಿಡಿಕಾರಿದರು.
ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸಿಗರು ತಾವು ಡಾ. ಅಂಬೇಡ್ಕರ್ ಪರ ಇರುವುದಾಗಿ ಭಿತ್ತಿಪತ್ರಗಳನ್ನು ಪ್ರದರ್ಶಿಸಿದ್ದಾರೆ. ಇವರಿಗೆ ಯಾವ ನೈತಿಕತೆ ಇದೆ? ಅವರ ಫೋಟೊ ಹಿಡಿಯುವ ಅಧಿಕಾರ ಅವರಿಗೆ ಎಲ್ಲಿದೆ ಎಂದು ಪ್ರಶ್ನಿಸಿದರು. ಅಂಬೇಡ್ಕರ್ ಅನ್ನುವುದು ಫ್ಯಾಷನ್ ಆಗಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ವಿರೋಧಿಸಿ ಕಾಂಗ್ರೆಸ್ ನಡೆಸಿರುವ ಪ್ರತಿಭಟನೆಯನ್ನು ಆರ್ ಅಶೋಕ ವಿರೋಧಿಸಿದ್ದಾರೆ.
ಡಾ. ಅಂಬೇಡ್ಕರ ಅವರು ನಿಧನರಾದಾಗ ಅವರ ಸಮಾಧಿಗಾಗಿ ಜಾಗವನ್ನೂ ಕೊಡಲಿಲ್ಲ. ಮಹಾರಾಷ್ಟ್ರದ ಚುನಾವಣೆಯಲ್ಲಿ ಎರಡು ಬಾರಿ ಇಡೀ ಕಾಂಗ್ರೆಸ್ ಪಕ್ಷವೇ ಬಂದು ಅಂಬೇಡ್ಕರರನ್ನು ಸೋಲಿಸಿ ಸಂಭ್ರಮಿಸಿ ಪಟಾಕಿ ಹೊಡೆದಿದ್ದು ಗೊತ್ತಿಲ್ಲವೇ? ನಿಮಗೆ ನಾಚಿಕೆ ಆಗುವುದಿಲ್ಲವೇ ಎಂದು ಅವರು ಪ್ರಶ್ನಿಸಿದರು.
ಇಂದಿರಾಗಾAಧಿಗೆ ಭಾರತ ರತ್ನ, ನೆಹರೂಗೆ ಭಾರತ ರತ್ನ, ರಾಜೀವ್ ಗಾಂಧಿಗೂ ಭಾರತ ರತ್ನ, ಆದರೆ, ನೀವು ಡಾ. ಅಂಬೇಡ್ಕರರಿಗೆ ಯಾಕೆ ಕೊಟ್ಟಿಲ್ಲ? ಫೋಟೊ ಹಿಡಿದುಕೊಂಡು ಬಂದಿದ್ದೀರಲ್ಲವೇ? ಡಾ. ಅಂಬೇಡ್ಕರರಿಗೆ ಯಾಕೆ ಭಾರತ ರತ್ನ ಕೊಟ್ಟಿಲ್ಲ ಎಂದು ಪ್ರಶ್ನೆಯನ್ನು ಮುಂದಿಟ್ಟರು. ಡಾ. ಬಿ.ಆರ್.ಅಂಬೇಡ್ಕರ್ ಅವರ ಫೋಟೊ ಹಿಡಿಯುವ ಯೋಗ್ಯತೆಯೂ ನಿಮಗಿಲ್ಲ ಎಂದು ಖಂಡಿಸಿದರು.
More Stories
ಸಿಟಿ ರವಿ ವಿರುದ್ಧ ಕಾನೂನು ಹೋರಾಟ: ಲಕ್ಷ್ಮಿ ಹೆಬ್ಬಾಳಕರ
ಕಾಂಗ್ರೆಸ್ ಆರೋಪ ಸುಳ್ಳು: ಆತ್ಮಸಾಕ್ಷಿ ವಿರುದ್ಧ ನಡೆದುಕೊಂಡಿಲ್ಲ: ಸಿ ಟಿ ರವಿ
ಅಂಬೇಡ್ಕರ್ ವಿರೋಧಿ ಹೇಳಿಕೆ ಖಂಡಿಸಿ ಅಮಿತ್ ಶಾ ವಿರುದ್ಧ ಪ್ರತಿಭಟನೆ