riseofgadag.com

ಕನ್ನಡ ಜನಮನದ ಜೀವನಾಡಿ

ಹೆಬ್ಬಾಳಕರ ಆರೋಪ ಸುಳ್ಳು ಎಂದು ಬಿಜೆಪಿ ಪ್ರತಿಭಟನೆ

ಗದಗ: ಎಂಎಲ್ಸಿ ಸಿ ಟಿ ರವಿ ವಿರುದ್ಧ ಸುಳ್ಳು ಆರೋಪದ ಮೇಲೆ ಬಂಧಿಸಿರುವುದನ್ನು ಖಂಡಿಸಿ ಶುಕ್ರವಾರ ಬಿಜೆಪಿ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಕಾಂಗ್ರೆಸ್ ಕಚೇರಿ ಎದುರು ಡಾ. ಬಿ ಆರ್ ಅಂಬೇಡ್ಕರ್ ಫೋಟೋ ಹಿಡಿದುಕೊಂಡು ಪ್ರತಿಭಟನೆ ಮಾಡಿದರಲ್ಲದೇ, ಕಾಂಗ್ರೆಸ್ ಪಕ್ಷದ ವಿರುದ್ಧ ಧಿಕ್ಕಾರ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಿ ಟಿ ರವಿ ಅವರು ಅಶ್ಲೀಲ ಪದ ಬಳಕೆ ಮಾಡಿಲ್ಲ. ಆದರೆ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುಳ್ಳು ಆರೋಪ ಮಾಡಿದ್ದಾರೆ ಎಂದು ಕಿಡಿಕಾರಿದರು.

ಈ ಸಂದರ್ಭದಲ್ಲಿ ಬಿಜೆಪಿ ಗದಗ ಜಿಲ್ಲಾಧ್ಯಕ್ಷ ರಾಜು ಕುರಡಗಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ ಅಕ್ಕಿ, ಶಿವರಾಜ ಹಿರೇಮನಿ ಪಾಟೀಲ, ನಗರಸಭೆ ಸದಸ್ಯ ಅನಿಲ ಅಬ್ಬಿಗೇರಿ, ಮುಖಂಡರಾದ ಅಶೋಕ ಸಂಕಣ್ಣವರ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಬಿಜೆಪಿ ಪ್ರತಿಭಟನೆ ಹಿನ್ನೆಲೆ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಬ್ಯಾರಿಕೇಡ್ ಹಾಕಿ ಪೊಲೀಸ್ ಭದ್ರತೆ ನೀಡಲಾಗಿತ್ತು.

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 73536 56555