riseofgadag.com

ಕನ್ನಡ ಜನಮನದ ಜೀವನಾಡಿ

ಅಂಬೇಡ್ಕರ್ ವಿರೋಧಿ ಹೇಳಿಕೆ ಖಂಡಿಸಿ ಅಮಿತ್ ಶಾ ವಿರುದ್ಧ ಪ್ರತಿಭಟನೆ

ಗದಗ: ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ ವಿರುದ್ಧ ನೀಡಿರುವ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ನಗರದ ಮಹಾತ್ಮಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ವಿರೋಧಿ ಕೇಂದ್ರ ಸಚಿವ ಅಮಿತ್ ಶಾ ಬ್ಯಾನರ್ ಪ್ರದರ್ಶಿಸಿ ಘೋಷಣೆ ಕೂಗಿದರಲ್ಲದೇ, ಸಂವಿಧಾನ ವಿರೋಧಿ ಅಮಿತ್ ಶಾ ಅವರನ್ನು ಕೂಡಲೇ ಸಂಪುಟದಿAದ ಕೈಬಿಡಬೇಕು ಎಂದು ಆಗ್ರಹಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಹ ಅಮಿತ್ ಶಾ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವುದು ಸರಿಯಲ್ಲ. ಸಂವಿಧಾನದ ತಳಹದಿಯಲ್ಲಿಯೇ ಕೇಂದ್ರ ಸರ್ಕಾರ ನಡೆಯುತಿರುವುದು ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ದಲಿತ ಸಂಘಟನೆಯ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 73536 56555