riseofgadag.com

ಕನ್ನಡ ಜನಮನದ ಜೀವನಾಡಿ

ಸಿಟಿ ರವಿ ವಿರುದ್ಧ ಕಾನೂನು ಹೋರಾಟ: ಲಕ್ಷ್ಮಿ ಹೆಬ್ಬಾಳಕರ

ಬೆಳಗಾವಿ: ವಿಧಾನಮಂಡಲ ಅಧಿವೇಶನದಲ್ಲಿ ಪರಿಷತ್ ಸದಸ್ಯ ಸಿ ಟಿ ರವಿ ಅವಾಚ್ಯ ಪದ ಬಳಕೆ ಕುರಿತಂತೆ ವಿಡಿಯೋ ಆಡಿಯೋ ದಾಖಲೆಯನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಬಿಡುಗಡೆ ಮಾಡಿದ್ದಲ್ಲದೇ, ಸಿ ಟಿ ರವಿ ವಿರುದ್ಧ ಕಾನೂನು ಸಮರ ಮುಂದುವರಿಸುತ್ತೇನೆ ಎಂದು ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬಿಜೆಪಿ ಎಂಎಲ್‌ಸಿ ಸಿ ಟಿ ರವಿ ಅವಾಚ್ಯ ಭಾಷೆಯಿಂದ ನೊಂದಿದ್ದು ಕಾನೂನು ಹೋರಾಟ ಮಾಡಲು ಸಿದ್ದತೆ ನಡೆಸಿದ್ದೇನೆ. ಕಳೆದ ಎರಡೂವರೆ ದಶಕಗಳಿಂದ ಸಂಘರ್ಷದಿAದಲೇ ಮೇಲೆ ಬಂದಿದ್ದೇನೆ. ನಾನೇನು ರೆಡ್ ಕಾರ್ಪೆಟ್ ಮೇಲೆ ಬಂದಿಲ್ಲ. ಇದನ್ನು ಸಹ ಎದುರಿಸುತ್ತೇನೆ ಎಂದರು.
ಘಟನೆ ಬಳಿಕ ಸಿಟಿ ರವಿ ಹಾರ ತುರಾಯಿ ಹಾಕಿಸಿಕೊಂಡು ವೈಭವಿಕರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಅಪರಾಧಿ ಭಾವನೆ ಕಾಡುತ್ತಿದೆ. ನಾನು ಮತ್ತೆ ಸಭಾಪತಿ ಅವರಿಗೆ ದೂರು ಕೊಡುತ್ತೇನೆ. ಸಿಟಿ ರವಿ ವಿರುದ್ಧ ಹೋರಾಟ ಮುಂದುವರಿಸುವೆ. ಪೊಲೀಸ್ ತನಿಖೆ ಬೇಗ ಆಗಬೇಕು. ಎಫ್ ಎಸ್ ಎಲ್ ವರದಿ ಬೇಗ ಬಹಿರಂಗವಾಗಬೇಕು. ಇಂಥ ಸಂದರ್ಭದಲ್ಲೂ ಬಿಜೆಪಿಯವರು ಸಿಟಿ ರವಿ ಬೆನ್ನಿಗೆ ನಿಂತಿದ್ದಾರೆ ಎಂದು ಸಚಿವರು ಕಿಡಿಕಾರಿದರು.
ಸಿಟಿ ರವಿ ಅವರಿಗೆ ಏನಾಗಿದೆ ಗಾಯ, ಎಷ್ಟಾಗಿದೆ ಗಾಯ. ಪೊಲೀಸರು ಎನ್ ಕೌಂಟರ್ ಮಾಡುತ್ತಿದ್ದರು ಅಂತಾರಲ್ಲಾ, ನಾಚಿಕೆ ಆಗಲ್ವ ನಿಮಗೆ. ಇಡೀ ಕರ್ನಾಟಕದ ಜನತೆ ನಿಮಗೆ ಛೀಮಾರಿ ಹಾಕುತ್ತಿದ್ದಾರೆ. ಕಾನೂನು ಪ್ರಕಾರ ಪೊಲೀಸರು ಏನು ಮಾಡಬೇಕು ಅದನ್ನು ಮಾಡಿದ್ದಾರೆ. ಪ್ರಕರಣದ ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಸಿಟಿ ರವಿ ವಿರುದ್ಧ ಪ್ರಧಾನಿ, ರಾಷ್ಟ್ರಪತಿಗೂ ಪತ್ರ ಬರೆಯುತ್ತೇನೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಹೇಳಿದರು.

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 73536 56555