riseofgadag.com

ಕನ್ನಡ ಜನಮನದ ಜೀವನಾಡಿ

ಸದನದೊಳಗಿನ ವಿಚಾರದಲ್ಲಿ ಪೊಲೀಸರಿಗೆ ಕ್ರಮ ಕೈಗೊಳ್ಳಲು ಅಧಿಕಾರವಿಲ್ಲ: ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು: ಸದನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ ನಂತರ ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅವರನ್ನು ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಬಂಧಿಸಲಾಗಿದೆ. ಪರಿಷತ್ತಿನ ಒಳಗೆ ನಡೆದ ಘಟನೆಯಲ್ಲಿ ಪೊಲೀಸರು ಮಧ್ಯೆ ಪ್ರವೇಶಿಸಬಾರದು, ಸದನದೊಳಗೆ ನಡೆದಿರುವ ವಿಚಾರದಲ್ಲಿ ಪೊಲೀಸರಿಗೆ ಕ್ರಮ ಕೈಗೊಳ್ಳಲು ಅಧಿಕಾರವಿಲ್ಲ ಎಂದು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ, ನಾವು ಎರಡೂ ಕಡೆಯಿಂದ ಯಾವುದೇ ದೂರುಗಳನ್ನು ಸ್ವೀಕರಿಸಿಲ್ಲ. ಈ ಬಗ್ಗೆ ದೂರು ನೀಡಿದರೆ ನಾವು ಕ್ರಮ ಕೈಗೊಳ್ಳುತ್ತೇವೆ ಎಂದರು.

ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅವರು ವಿಧಾನ ಪರಿಷತ್ತಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಪ್ರಕರಣವು ಮುಗಿದ ಅಧ್ಯಾಯವಾಗಿದ್ದು, ಈ ಪ್ರಕರಣದಲ್ಲಿ ಪೊಲೀಸರ ಹಸ್ತಕ್ಷೇಪ ಸ್ವೀಕಾರಾರ್ಹವಲ್ಲ ಎಂದರು.

ಘಟನೆಗೆ ಸಂಬAಧಿಸಿದAತೆ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರು ಪರಿಷತ್ತಿನ ಒಳಗೆ ಬಂದಿಲ್ಲ. ಘಟನೆಗೆ ಸಂಬAಧಿಸಿದAತೆ ನಮ್ಮ ಬಳಿ ವಿಡಿಯೋ ಮತ್ತು ಆಡಿಯೋ ರೆಕಾರ್ಡಿಂಗ್ ಲಭ್ಯವಿದ್ದರೆ ಈ ವಿಷಯವನ್ನು ಪರಿಗಣಿಸಲಾಗುವುದು. ಬೇರೆ ಯಾವುದೇ ಪಕ್ಷವು ವಿಡಿಯೋ ಅಥವಾ ಆಡಿಯೋ ಒದಗಿಸಿದರೆ, ನಾವು ಅದನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ಕಳುಹಿಸುತ್ತೇವೆ. ಆ ದಿನ ಅಧಿವೇಶನ ಮುಗಿದ ನಂತರ ಯಾವುದೇ ವಿಡಿಯೋ ರೆಕಾರ್ಡಿಂಗ್ ಮಾಡಿಲ್ಲ ಎಂದು ಹೇಳಿದರು.

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 73536 56555