ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ ಅವರಿಗೆ ಅಮೆರಿಕದಲ್ಲಿ ನಡೆಸಲಾದ ಆಪರೇಷನ್ ಯಶಸ್ವಿಯಾಗಿದೆ.
ಈ ಕುರಿತು ಕುಟುಂಬ ಸದಸ್ಯರು ಮಾಹಿತಿ ಹಂಚಿಕೊAಡಿದ್ದಾರೆ. ಅಮೆರಿಕದ ಮಿಯಾಮಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಡಿ.೨೪ರಂದು ಭಾರತೀಯ ಕಾಲಮಾನ ಸಂಜೆ ೬ ಗಂಟೆಯಿAದ ಶಸ್ತ್ರಚಿಕಿತ್ಸೆ ಆರಂಭಿಸಿ, ತಡರಾತ್ರಿವರೆಗೆ ಮಾಡಲಾಯಿತು. ಡಾ. ಮುರುಗೇಶ ಮನೋಹರನ್ ನೇತೃತ್ವದಲ್ಲಿ ಈ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಗೀತಾ ಶಿವರಾಜಕುಮಾರ, ಮಧು ಬಂಗಾರಪ್ಪ ಅವರು ಎಲ್ಲರ ಪ್ರಾರ್ಥನೆ ಮತ್ತು ಬೆಂಬಲಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಈ ಕುರಿತು ಡಾ. ಮನೋಹರ್ ಅವರು ಹೆಲ್ತ್ ಅಪ್‌ಡೇಟ್ ನೀಡಿದ್ದು, ಶಿವರಾಜ್‌ಕುಮಾರ್ ಅವರ ಇತ್ತೀಚಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅವರು ಈಗ ಸ್ಥಿರ ಪರಿಸ್ಥಿತಿಯಲ್ಲಿ ಇದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.
ಶಸ್ತ್ರಚಿಕಿತ್ಸೆಯ ವೇಳೆ ಮತ್ತು ಶಸ್ತ್ರಚಿಕಿತ್ಸೆ ನಂತರದ ಆರೈಕೆ ಸಮಯದಲ್ಲಿ ಶಿವರಾಜಕುಮಾರ ಅವರ ಆರೋಗ್ಯ ಸ್ಥಿತಿಯು ಸ್ಥಿರವಾಗಿತ್ತು. ಪ್ರಸ್ತುತ ಶಿವರಾಜಕುಮಾರ ಅವರು ತೀವ್ರ ನಿರೀಕ್ಷಣೆಯಲ್ಲಿದ್ದಾರೆ ಮತ್ತು ಪರಿಣತ ವೈದ್ಯರು, ಸಿಬ್ಬಂದಿಗಳ ತಂಡದಿAದ ಅತ್ಯುತ್ತಮ ಆರೈಕೆ ಪಡೆಯುತ್ತಿದ್ದಾರೆ ಎಂದು ಕುಟುಂಬ ಸದಸ್ಯರು ಮಾಹಿತಿ ಹಂಚಿಕೊAಡಿದ್ದಾರೆ.
More Stories
ಮೈಸೂರಿನ ಫಾರಂಹೌಸ್ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿಶ್ರಾಂತಿ
ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ ಸೇರಿ ೭ ಆರೋಪಿಗಳಿಗೆ ಬೇಲ್