riseofgadag.com

ಕನ್ನಡ ಜನಮನದ ಜೀವನಾಡಿ

ಬೆಳಗಾವಿಯಲ್ಲಿ ಗಾಂಧಿ ಭಾರತ ಸಮಾವೇಶ: ಎರಡು ದಿನ ಶಾಲೆಗಳು ರಜೆ

ಬೆಳಗಾವಿ: ೧೯೨೪ರಲ್ಲಿ ಸ್ವಾತಂತ್ರ‍್ಯ ಸಂಗ್ರಾಮಕ್ಕಾಗಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಮಹಾ ಅಧಿವೇಶನ ನಡೆದಿತ್ತು. ಆ ಅಧಿವೇಶನ ನಡೆದು ನೂರು ವರ್ಷಗಳು ತುಂಬುತ್ತಿವೆ. ಹೀಗಾಗಿ ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷ ವಿಜೃಂಭಣೆಯಿAದ ಆಚರಿಸಲು ಸಜ್ಜಾಗಿದ್ದು, ಬೆಳಗಾವಿ ಮದುವಣಗಿತ್ತಿಯಂತೆ ಸಿಂಗಾರಗೊAಡಿದೆ. ಈ ಗಾಂಧಿ ಭಾರತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಮತ್ತು ತಾಲೂಕಿನ ಸರ್ಕಾರಿ, ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. ಡಿಸೆಂಬರ್ ೨೬ ಮತ್ತು ೨೭ ಎರಡು ದಿನ ರಜೆ ಘೋಷಣೆ ಮಾಡಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

ಗುರುವಾರ ಮತ್ತು ಶುಕ್ರವಾರ ಎರಡು ದಿನ ನಡೆಯುವ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆದಿದೆ. ಗುರುವಾರ ಸಂಜೆ ಪೀರನವಾಡಿಯಲ್ಲಿರುವ ಗಾಂಧಿ ಭವನದಲ್ಲಿ ಎಐಸಿಸಿ ಕಾರ್ಯಕಾರಿಣಿ ಸಭೆ ನಡೆಯಲಿದೆ. ಖರ್ಗೆ ಅವರೇ ಎಲ್ಲರಿಗೂ ಡಿನ್ನರ್ ಪಾರ್ಟಿ ಆಯೋಜಿಸಿದ್ದಾರೆ. ಇನ್ನು ಗುರುವಾರ ಸುವರ್ಣ ಸೌಧದಲ್ಲಿ ಗಾಂಧಿ ಪ್ರತಿಮೆ ಉದ್ಘಾಟನೆ ಮಾಡಲಿದ್ದು ಫೋಟೋ ಸೆಷನ್ ಕೂಡ ನಡೆಯಲಿದೆ. ಇದಕ್ಕಾಗಿ ಈಗಾಗಲೇ ಕಾಂಗ್ರೆಸ್ ನಾಯಕರ ದಂಡೇ ಕುಂದಾನಗರಿಯಲ್ಲಿ ಬೀಡು ಬಿಟ್ಟಿದೆ. ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಮುನಿಯಪ್ಪ, ಎಂಬಿ ಪಾಟೀಲ್ ಸೇರಿ ಘಟಾನುಘಟಿ ನಾಯಕರು ಬೆಳಗಾವಿಯಲ್ಲೇ ವಾಸ್ತವ್ಯ ಹೂಡಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ಅಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಎಲ್ಲಾ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ೧೪೦ ಸಂಸದರು ನಾಳೆ(ಡಿಸೆಂಬರ್ ೨೬) ಬೆಳಗಾವಿಗೆ ಆಗಮಿಸಲಿದ್ದು, ಪ್ರಮುಖ ನಾಯಕರಿಗೆ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ವಾಸ್ತವ್ಯ ವ್ಯವಸ್ಥೆ ಮಾಡಲಾಗಿದೆ.

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 73536 56555