ಬೆಳಗಾವಿ: ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೊತ್ಸವದ ಅಂಗವಾಗಿ ನಗರದ ಟಿಳಕವಾಡಿಯಲ್ಲಿನ ವೀರಸೌಧದಲ್ಲಿ ಗುರುವಾರ ಮಹಾತ್ಮಾ ಗಾಂಧೀಜಿಯವರ ನೂತನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅನಾವರಣಗೊಳಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ತದನಂತರ ವೀರಸೌಧದ ಆವರಣದಲ್ಲಿನ ಗಾಂಧೀ ಸ್ಮಾರಕ ಭವನದಲ್ಲಿನ ನವೀಕೃತ ಪೋಟೋ ಗ್ಯಾಲರಿಯನ್ನು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಉದ್ಘಾಟಿಸಿದರು.
ಇದೇ ವೇಳೆ ವೀರಸೌಧ(ಕಾಂಗ್ರೆಸ್ ಬಾವಿ) ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಸಸಿ ನೆಟ್ಟು ನೀರೆರೆದರು.
ಈ ಸಂದರ್ಭದಲ್ಲಿ ಸಚಿವರಾದ ಎಚ್.ಕೆ.ಪಾಟೀಲ, ಎಂ.ಬಿ.ಪಾಟೀಲ, ಎಚ್.ಸಿ.ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳಕರ್, ಶರಣಬಸಪ್ಪ ದರ್ಶನಾಪುರ, ಕೆ.ಎಚ್.ಮುನಿಯಪ್ಪ, ಶಾಸಕರಾದ ಆಸಿಫ್ (ರಾಜು) ಸೇಠ್, ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಆರ್.ವಿ.ದೇಶಪಾಂಡೆ, ಸರಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ, ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ವಾರ್ತಾ ಇಲಾಖೆಯ ಕಾರ್ಯದರ್ಶಿ ಕಾವೇರಿ ಬಿ.ಬಿ., ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಒಂ ಸಿಇಓ ರಾಹುಲ್ ಶಿಂಧೆ, ವಾರ್ತಾ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಡೊಳ್ಳಿನ, ಉಪ ನಿರ್ದೆಶಕರಾದ ಗುರುನಾಥ ಕಡಬೂರ ಮತ್ತಿತರರು ಉಪಸ್ಥಿತರಿದ್ದರು.
*ನೋಡಬನ್ನಿ ವೀರಸೌಧ ಫೋಟೋ ಗ್ಯಾಲರಿ*
ಬೆಳಗಾವಿ ಟಿಳಕವಾಡಿಯ ವೀರ ಸೌಧದಲ್ಲಿ ಅಳವಡಿಸಲಾಗಿರುವ ಹೊಸ ಫೋಟೋ ಗ್ಯಾಲರಿಯಲ್ಲಿ ಒಟ್ಟು 40 ಎಲ್ ಇ ಡಿ ಪೋಟೊಗಳು ಇವೆ.
ಇವುಗಳಲ್ಲಿ 1924 ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಜರುಗಿದ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ಸಂಬಂಧಿಸಿದ 17 ಭಾವಚಿತ್ರಗಳನ್ನು ಎಲ್‌ಇಡಿ ಆಧರಿಸಿ ಪ್ರದರ್ಶನಕ್ಕೆ ಸಿದ್ಧಗೊಳಿಸಲಾಗಿದೆ.
ಉಳಿದಂತೆ 1930ರ ಐತಿಹಾಸಿಕ ಉಪ್ಪಿನ ಸತ್ಯಾಗ್ರಹ, ಕುಷ್ಠರೋಗ ಭಯ ಹೋಗಲಾಡಿಸಲು ಪರ್ಚುರೇ ಶಾಸ್ತ್ರಿಗಳಿಗೆ ಚಿಕಿತ್ಸೆ ನೀಡುತ್ತಿರುವ ಬಾಪೂ, 1946ರ ಮುಂಬಯಿ ಕಾಂಗ್ರೆಸ್ ಅಧಿವೇಶನದ ಭಾವಚಿತ್ರ, ಮೋಹನ್‌ದಾಸ್ ರಿಂದ ಮಹಾತ್ಮವರೆಗೆ ಬೆಳವಣಿಗೆಯ ಪ್ರಮುಖ ಘಟ್ಟಗಳು, ಗಾಂಧೀಜಿಯವರ ಪಾರ್ಥಿವ ಶರೀರದ ಅಂತಿಮ ದರ್ಶನದ ಭಾವಚಿತ್ರ, ಲಂಡನ್ ದುಂಡು ಮೇಜಿನ ಪರಿಷತ್ತಿನಲ್ಲಿ ಭಾಗವಹಿಸಲು ಹೊರಟ ಸಂದರ್ಭದ ಚಿತ್ರ,
ಜಗತ್ತಿನ ಗಣ್ಯರಾದ ದಕ್ಷಿಣ ಆಫ್ರಿಕಾದ ನೆಲ್ಸನ್ ಮಂಡೇಲಾ, ನೊಬೆಲ್ ವಿಜೇತರಾದ ರೋಮಾ ರೋಲಾ, ಬರ್ಮಾ ದೇಶದ ಆಂಗ್ ಸಾನ್ ಸೂಕಿ ಅವರು ಬಾಪೂ ಬಗ್ಗೆ ಮಾತನಾಡಿರುವ ಭಾವಚಿತ್ರಗಳು, ಗಾಂಧೀಜಿಯವರನ್ನು ರಾಷ್ಟ್ರಪಿತ ಎಂದು ಕರೆದ ನೇತಾಜಿ ಸುಭಾಸ್ ಚಂದ್ರ ಬೋಸ್ ಹಾಗೂ ಮಹಾತ್ಮ ಗಾಂಧೀಜಿಯವರು ಹರಿಪುರ ಕಾಂಗ್ರೆಸ್ ಅಧಿವೇಶನದಲ್ಲಿ ಒಟ್ಟಿಗೆ ಕುಳಿತಿರುವ ಫೋಟೋ.
ಗಾಂಧೀಜಿಯವರನ್ನು ಮಹಾತ್ಮ ಎಂದು ಕರೆದ ರವೀಂದ್ರನಾಥ ಠಾಗೋರ್ ಅವರೊಂದಿಗೆ ಮಹಾತ್ಮಗಾಂಧೀಜಿಯವರ ಫೋಟೋ, ಮಹಾತ್ಮ ಗಾಂಧೀ ಹಾಗೂ ಕಸ್ತೂರಬಾ ದಂಪತಿಗಳ ತಾರುಣ್ಯದ ಭಾವಚಿತ್ರಗಳನ್ನು ವೀರ ಸೌಧದಲ್ಲಿ ಕಾಣಬಹುದಾಗಿದೆ.
More Stories
ಗಣರಾಜ್ಯೋತ್ಸವ ಪರೇಡ್ನಲ್ಲಿ ಲಕ್ಕುಂಡಿಯ ಶಿಲ್ಪಕಲೆ ವೈಭವ: ಲಕ್ಕುಂಡಿಯ ಬ್ರಹ್ಮ ಜಿನಾಲಯ ಸ್ತಬ್ದ ಚಿತ್ರ ಆಯ್ಕೆ
ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವು
ನೀರಿನ ಟ್ಯಾಂಕರ್ ಚಕ್ರ ತಲೆ ಮೇಲೆ ಹರಿದು ೨ ವರ್ಷದ ಮಗು ಸಾವು