ಗದಗ: ರಾಜ್ಯದಲ್ಲಿ ರೈತರಿಗೆ ಯೂರಿಯಾ ಗೊಬ್ಬರ ಕೊರತೆ ಎದುರಾಗಿದ್ದು, ಸರ್ಕಾರ ಮುಂಚಿತವಾಗಿ ಸ್ಟಾಕ್ ಮಾಡಬೇಕಿತ್ತು. ರೈತರಿಗೆ ಸಮರ್ಪಕ ಗೊಬ್ಬರ ವಿತರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.
ಜಿಲ್ಲೆಯ ಸೊರಟೂರ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಹೆಚ್ಚಿನ ಗೊಬ್ಬರ ಬೇಕು ಎಂದು ಕೇಂದ್ರ ಸರ್ಕಾರಕ್ಕೆ ಕೇಳಿದೆ. ಕೇಂದ್ರ ಕೃಷಿ ಸಚಿವರ ಜೊತೆ ಮಾತನಾಡಿ ಕೊಡಿಸುವಂತಹ ಪ್ರಯತ್ನ ಮಾಡುತ್ತೇನೆ. ರಾಜ್ಯದಲ್ಲಿದ್ದ ಗೊಬ್ಬರವನ್ನು ರೈತರಿಗೆ ಸಮರ್ಪಕವಾಗಿ ಸರ್ಕಾರ ಪೂರೈಕೆ ಮಾಡಲಿ ಎಂದರು.
ಮಹದಾಯಿ ವಿಚಾರವಾಗಿ ಮಾತನಾಡಿ, ಮಹದಾಯಿ ಏನಾದ್ರು ಪ್ರಗತಿಯಾಗಿದ್ರೆ ಅದಕ್ಕೆ ಕಾರಣ ಬಿಜೆಪಿ. ಮೋದಿ ಸರ್ಕಾರ ಬಂದ್ಮೇಲೆ ಮಹದಾಯಿ ಆದೇಶ ಹೊರಡಿಸಿದ್ದರು. ಮಾಡಿಸಿದ್ದ ಡಿಪಿಆರ್‌ನ್ನು ಎನ್‌ಡಿಎ ಸರ್ಕಾರ ಕೇಂದ್ರದಲ್ಲಿ ಒಪ್ಪಿಗೆ ಪಡೆಯಿತು. ಕಾಂಗ್ರೆಸ್ ಏನು ಮಾಡಲಿಲ್ಲ. ಬರೀ ನಾವು ಮಾಡಿದ ಕೆಲಸಕ್ಕೆ ಅಡ್ಡಗೋಡೆ ಕಟ್ಟಿದ್ದಾರೆ. ಮಹದಾಯಿ ಮಲಪ್ರಭಾಗೆ ಹರಿಯಬಾರದು ಅಂತ ಗೋಡೆ ಕಟ್ಟಿದರು. ರಾಜ್ಯದ ವಿಷಯದಲ್ಲಿ ರಾಜಕಾರಣ ಬೇಡ. ನ್ಯಾಯ ಸಮ್ಮತವಾಗಿ ಕಾಂಗ್ರೆಸ್ ಸರ್ಕಾರ ನಡೆಯಲಿ. ಗೋವಾ ಸಿಎಂ ಹೇಳಿಕೆಯನ್ನು ನಾನು ಸಹ ಖಂಡಿಸುತ್ತೇನೆ. ಕಾಂಗ್ರೆಸ್‌ಗೆ ಮಹದಾಯಿ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಸೋನಿಯಾ ಗಾಂಧಿ ಗೋವಾ ಚುನಾವಣೆಯಲ್ಲಿ ಹನಿ ನೀರು ಮಹದಾಯಿಂದ ಮಲಪ್ರಭಾಗೆ ಕೊಡಲ್ಲ ಎಂದಿದ್ದರು. ಹೀಗಾಗಿ ಕಾಂಗ್ರೆಸ್‌ಗೆ ಯಾವ ನೈತಿಕ ಹಕ್ಕಿದೆ ಎಂದು ಕಿಡಿಕಾರಿದರು.

More Stories
ಅರ್ಧಗಂಟೆ ಮಳೆ ಕುಸಿದು ಬಿತ್ತು ಛಾವಣಿ
ಸೀರೆಯಲ್ಲಿ ‘ಆಪರೇಷನ್ ಸಿಂಧೂರ’ ಶೌರ್ಯ ನೇಯ್ದ ಗದಗಿನ ನೇಕಾರ
ಬೆಳಗಾವಿಯಲ್ಲಿ ಗಾಂಧಿ ಭಾರತ ಸಮಾವೇಶ: ಎರಡು ದಿನ ಶಾಲೆಗಳು ರಜೆ