ಗದಗ: ಬೋಲ್ಟ್ ಹಾಗೂ ಸ್ಕ್ರೂ ತಯಾರಿಕಾ ಫ್ಯಾಕ್ಟರಿಯಲ್ಲಿ ತಯಾರಿಸಿ, ಉಗ್ರಾಣದಲ್ಲಿಟ್ಟಿದ್ದ ಕಬ್ಬಿಣದ ವಸ್ತುಗಳನ್ನು ಕಳ್ಳತನ ಮಾಡಿದ್ದ ಆರೋಪಿಗಳನ್ನು ಹಿಡಿಯುವಲ್ಲಿ ಗದಗನ ಬೆಟಗೇರಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ಒಂದು ವಾರದಲ್ಲಿ ಸುಮಾರು 4 ಲಕ್ಷಕ್ಕಿಂತ ಅಧಿಕ ಮೊತ್ತದ ಕಬ್ಬಿಣದ ವಸ್ತುಗಳು ಕಳ್ಳತನವಾಗಿದ್ದವು. ಈ ಕುರಿತು ಅಗಸ್ಟ್ 8 ರಂದು ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಬೆಟಗೇರಿ ಪೊಲೀಸರು, ಜಿಲ್ಲಾ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಹಾಗೂ ಡಿಎಸ್ಪಿ ಮುರ್ತುಜಾ ಖಾದ್ರಿ, ಸಿಪಿಐ ಧೀರಜ್ ಶಿಂಧೆ ಅವರ ಮಾರ್ಗದರ್ಶನದಲ್ಲಿ, ಬೆಟಗೇರಿ ಪಿಎಸ್ಐ ಎಲ್ ಎಂ ಆರಿ ನೇತೃತ್ವದಲ್ಲಿ ತಂಡ ರಚಿಸಿಕೊಂಡು ತನಿಖೆ ನಡೆಸಿದ್ದಾರೆ. ತನಿಖೆಯ ನಂತರ ಕೊನೆಗೂ ಕಾರ್ಯಚರಣೆಯಲ್ಲಿ ಕಳ್ಳರನ್ನು ಅಂದರ್ ಮಾಡಿ, ಸುಮಾರು ನಾಲ್ಕು ಲಕ್ಷಕ್ಕೂ ಅಧಿಕ ಮೊತ್ತದ ಕಬ್ಬಿಣದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಕೃತ್ಯಕ್ಕೆ ಬಳಸಿದ ಎರಡು ಅಟೋ ರಿಕ್ಷಾ ವಶಪಡಿಸಿಕೊಂಡು, ಆರೋಪಿಗಳನ್ನು ಬಂಧಿಸುವಲ್ಲಿ ಬೇಟಗೇರಿ ಪೊಲೀಸರು ಯಶಸ್ವಿಯಾಗಿದ್ದಾರೆ.
More Stories
ಬೆಳಗಾವಿ: ವೀರಸೌಧದಲ್ಲಿ ಗಾಂಧೀ ಪ್ರತಿಮೆ ಅನಾವರಣಗೊಳಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ
ಗಣರಾಜ್ಯೋತ್ಸವ ಪರೇಡ್ನಲ್ಲಿ ಲಕ್ಕುಂಡಿಯ ಶಿಲ್ಪಕಲೆ ವೈಭವ: ಲಕ್ಕುಂಡಿಯ ಬ್ರಹ್ಮ ಜಿನಾಲಯ ಸ್ತಬ್ದ ಚಿತ್ರ ಆಯ್ಕೆ
ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವು